ಜಿಲ್ಲೆಗಳು

ಕುಂದುಕೊರತೆ ನಿವಾರಿಸುವಂತೆ ಜಿ ಟಿ ದೇವೇಗೌಡರಿಗೆ ಮನವಿ

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ ಮುಂತಾದ ಮೂಲಭೂತ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲದಿರುವುದನ್ನು ಬಡಾವಣೆಯ ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬಡಾವಣೆಯ ಕೆಲಸಗಳನ್ನು ಪ್ರಾರಂಭಿಸಲು ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್ ಎಂ ಉಮೇಶ್, ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ, ಮತ್ತು ಬಡಾವಣೆಯ ನಿವಾಸಿಗಳಾದ ನರಸಿಂಹ , ರಾಜಗೋಪಾಲ್,ಜವರೇಶ್, ಗಂಟಯ್ಯ,ಆನಂದಮೂರ್ತಿ, ಬಸಪ್ಪ, ನಾಗಪ್ಪ , ಸವಿತಾ , ಜಯಲಕ್ಷ್ಮಿ, ವನಜಾ, ಆಶಾ, ಸತೀಶ್ ಮಹಂತ, ಗಣೇಶ್ ಕಿಣಿ , ಚಂದ್ರಶೇಖರ್,ವಿನೋದಿನಿ, ಸುಜಾತ, ಚಿಕ್ಕತಾಯಮ್ಮ , ಪುಟ್ಟಸ್ವಾಮಿ, ಕುಮಾರ್, ಶಿವರಾಂ, ಮುಂತಾದವರು ಇದ್ದರು.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

3 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

3 hours ago