ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.
ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್‌ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.
ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.
ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…