ಜಿಲ್ಲೆಗಳು

ಮೈಸೂರು ವಿವಿ ಹಂಗಾಮಿ ಕುಲಪತಿಗಳಾಗಿ ಪ್ರೊ.ಮುಜಾಫರ್‌ ಎಚ್‌.ಅಸಾದಿ ನೇಮಕ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.

ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್‌ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.

ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.

ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago