Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಮ-ನರೇಗಾ ಯೋಜನೆಯಡಿಯಲ್ಲಿ ಕಡಿಮೆ ಮಾನವ ದಿನಗಳನ್ನು ಸಾಧಿಸಿರುವ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮಾನವ ದಿನಗಳನ್ನು ಸಾಧಿಸಲು ಸೂಚನೆ ನೀಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಪ್ರಗತಿ, ಶಿಶುಪಾಲನಾ ಕೇಂದ್ರ ಪ್ರಗತಿ, ಎನ್ ಎಮ್ ಎಮ್ ಎಸ್ ಪ್ರಗತಿ, ಸಾಮಾಜಿಕ ಪರಿಶೋಧನೆ ಪ್ರಗತಿ, ಸ್ವ ಸಹಾಯ ಸಂಘಗಳ ವರ್ಕ್ ಶೆಡ್, ಹಾಗೂ ಸ್ವಚ್ಛ ಭಾರತ್ ಅಭಿಯಾನ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ ಕುರಿತು ಚರ್ಚಿಸಿದರು.

ಜಲಜೀವನ್ ಮಿಷನ್ ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತುರ್ತು ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.

ಪಿಆರ್ ಇಡಿ ಪ್ರಗತಿ, ತೆರಿಗೆ ಪರಿಷ್ಕರಣೆ, ತೆರಿಗೆ ವಸೂಲಾತಿ, ಡಿಜಿಟಲ್ ಗ್ರಂಥಾಲಯ, ಸಕಾಲ ಯೋಜನೆ, ಸರ್ಕಾರಿ ಸಿಬ್ಬಂಧಿ, ಗ್ರಾ.ಪಂ ಇ-ಹಾಜರಾತಿ ಪ್ರಗತಿ, ಆಸ್ತಿ ಸಮೀಕ್ಷೆ ಹಾಗೂ 14 ಮತ್ತು 15ನೇ ಹಣಕಾಸಿನ ಪ್ರಗತಿ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ