ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಮ-ನರೇಗಾ ಯೋಜನೆಯಡಿಯಲ್ಲಿ ಕಡಿಮೆ ಮಾನವ ದಿನಗಳನ್ನು ಸಾಧಿಸಿರುವ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮಾನವ ದಿನಗಳನ್ನು ಸಾಧಿಸಲು ಸೂಚನೆ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಪ್ರಗತಿ, ಶಿಶುಪಾಲನಾ ಕೇಂದ್ರ ಪ್ರಗತಿ, ಎನ್ ಎಮ್ ಎಮ್ ಎಸ್ ಪ್ರಗತಿ, ಸಾಮಾಜಿಕ ಪರಿಶೋಧನೆ ಪ್ರಗತಿ, ಸ್ವ ಸಹಾಯ ಸಂಘಗಳ ವರ್ಕ್ ಶೆಡ್, ಹಾಗೂ ಸ್ವಚ್ಛ ಭಾರತ್ ಅಭಿಯಾನ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ ಕುರಿತು ಚರ್ಚಿಸಿದರು.
ಜಲಜೀವನ್ ಮಿಷನ್ ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತುರ್ತು ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.
ಪಿಆರ್ ಇಡಿ ಪ್ರಗತಿ, ತೆರಿಗೆ ಪರಿಷ್ಕರಣೆ, ತೆರಿಗೆ ವಸೂಲಾತಿ, ಡಿಜಿಟಲ್ ಗ್ರಂಥಾಲಯ, ಸಕಾಲ ಯೋಜನೆ, ಸರ್ಕಾರಿ ಸಿಬ್ಬಂಧಿ, ಗ್ರಾ.ಪಂ ಇ-ಹಾಜರಾತಿ ಪ್ರಗತಿ, ಆಸ್ತಿ ಸಮೀಕ್ಷೆ ಹಾಗೂ 14 ಮತ್ತು 15ನೇ ಹಣಕಾಸಿನ ಪ್ರಗತಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದ
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…