10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ
ದಿನೇಶ್ ಕುಮಾರ್
ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾದ ನಗರಪಾಲಿಕೆ ಅದರಲ್ಲಿ ಯಶಸ್ಸು ಕಂಡಿದ್ದು, ಕಳೆದ 10 ತಿಂಗಳ ಅವಧಿಯಲ್ಲಿ ಬರೋಬ್ಬರಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ.
ಈ ಹಿಂದೆ ತೆರಿಗೆ ಸಂಗ್ರಹ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಕೂಗಿತ್ತು. ಆದರೆ, ನಗರಪಾಲಿಕೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ.
2021-22ನೇ ಹಣಕಾಸು ವರ್ಷದ ಅಂತ್ಯಕ್ಕೆ ಇನ್ನೂ ಎರಡೂವರೆ ತಿಂಗಳು ಬಾಕಿ ಇರುವಾಗಲೇ ನಗರಪಾಲಿಕೆ ಅಧಿಕಾರಿಗಳು ಸಾಕಷ್ಟು ಕಸರತ್ತು ನಡೆಸಿ ಹೆಚ್ಚಿನ ತೆರಿಗೆ ಸಂಗ್ರಹಿಸಿ ದಾಖಲೆ ನಿರ್ಮಿಸಿದ್ದಾರೆ. ಕಳೆದ ಹತ್ತು ವರ್ಷಗಳ ಅಂಕಿ, ಅಂಶ ಗಮನಿಸಿದಲ್ಲಿ ಇಷ್ಟು ಮೊತ್ತದ ತೆರಿಗೆ ವಸೂಲಾದ ಉದಾಹರಣೆಯೇ ಇಲ್ಲ.
ಹಣಕಾಸು ವರ್ಷಾರಂಭವಾದ ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ನಗರಪಾಲಿಕೆ ವತಿಯಿಂದ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಈ ಅವಕಾಶವನ್ನು ನಾಗರಿಕರು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದು, ವರ್ಷದಿಂದ ವರ್ಷಕ್ಕೆ ಈ ಪ್ರಮಾಣ ಹೆಚ್ಚುತ್ತಲಿದೆ. ಅದರಂತೆ ಈ ಬಾರಿಯೂ ರಿಯಾಯಿತಿ ಪ್ರಕಟಿಸಲಾಗಿತ್ತು.
ಅಲ್ಲದೆ, ಮಾಧ್ಯಮಗಳ ಮೂಲಕ ಕೂಡ ರಿಯಾಯಿತಿ ಸಂಬಂಧ ಪ್ರಕಟಣೆ ಹೊರಡಿಸಲಾಗಿತ್ತು. ಜೊತೆಗೆ ಈ ವರ್ಷ ಏಪ್ರಿಲ್ ತಿಂಗಳ ಅವಧಿಯಲ್ಲಿ 60 ಕೋಟಿ ರೂ.ಗಳ ಸಂಗ್ರಹದ ಗುರಿ ಹೊಂದಲಾಗಿತ್ತು. ಅದರಂತೆ ರಜಾ ದಿನಗಳನ್ನು ಹೊರತುಪಡಿಸಿ ಏಪ್ರಿಲ್ ತಿಂಗಳಿನಲ್ಲಿ 60 ಕೋಟಿ ರೂ.ಗೂ ಹೆಚ್ಚಿನ ತೆರಿಗೆ ವಸೂಲಾಗಿತ್ತು.
ನಂತರದ ದಿನಗಳಲ್ಲಿ ಶೇ.15ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿದ್ದ ಕಾರಣಕ್ಕಾಗಿ ದಂಡ ರಹಿತ ತೆರಿಗೆ ಪಾವತಿಸಲು ಒಂದು ತಿಂಗಳು ಮುಂದುವರಿಸಲಾಗಿತ್ತು. ಇದೀಗ ಶೇ.2ರ ದಂಡ ರಹಿತವಾಗಿ ಜೂನ್ ತಿಂಗಳಿನಲ್ಲಿಯೂ ತೆರಿಗೆ ಪಾವತಿಸಲು ನಗರಪಾಲಿಕೆ ಅವಕಾಶ ಮಾಡಿಕೊಟ್ಟಿತ್ತು. ಇದರಿಂದಾಗಿ ಗುರಿಗಿಂತ ಹೆಚ್ಚು ತೆರಿಗೆ ಸಂಗ್ರಹವಾಗಿದೆ.
ತೆರಿಗೆ ಸಂಗ್ರಹ ಕೇಂದ್ರಗಳ ಹೆಚ್ಚಳ: ತೆರಿಗೆ ರಿಯಾಯಿತಿ ಇದ್ದ ಹಿನ್ನೆಲೆುಂಲ್ಲಿ ನಗರದ 9 ವಲಯ ಕಚೇರಿಗಳಲ್ಲಿ ತೆರಿಗೆ ಸಂಗ್ರಹಕ್ಕೆ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಇದರ ಜತೆಗೆ ವಲಯ ಕಚೇರಿ ಆವರಣಗಳಲ್ಲಿ ಶಾಮಿಯಾನ ಹಾಗೂ ಕುರ್ಚಿಗಳನ್ನು ಹಾಕುವ ಮೂಲಕ ತೆರಿಗೆ ಪಾವತಿಸಲು ಬರುವ ಹಿರಿಯ ನಾಗರೀಕರಿಗೆ ಾಂವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿತ್ತು.
ಈ ಎಲ್ಲಾ ಅಂಶಗಳ ಹಿನ್ನೆಲೆುಂಲ್ಲಿ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಅಧಿಕಾರಿಗಳು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಸಾಧನೆಯಾಗಿದೆ. ಕಳೆದ ಬಾರಿ ಈ ವೇಳೆಗೆ 120 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಈ ಬಾರಿ 165 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ಹೊಂದಲಾಗಿದ್ದು, ಗುರಿ ತಲುಪಲು ಇನ್ನೂ ಮೂರು ತಿಂಗಳು ಕಾಲಾವಕಾಶವಿದೆ.
ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಜನರು ರಿಯಾಯಿತಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ 165 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಇದೆ. ಗುರಿಯನ್ನು ದಾಟಿ 175 ಕೋಟಿ ರೂ ತೆರಿಗೆ ಸಂಗ್ರಹವಾಗುವ ಸಾಧ್ಯತೆ ಇದೆ.
-ಲಕ್ಷ್ಮೀ ಕಾಂತರೆಡ್ಡಿ, ನಗರಪಾಲಿಕೆ
ಆಯುಕ್ತರು.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…