ಗುಂಡ್ಲುಪೇಟೆ: ಹೊಸಪೇಟೆಯಲ್ಲಿ ಖ್ಯಾತ ನಟ ದರ್ಶನ್‌ರವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಉನ್ನು ಬಂಧಿಸಿ, ದರ್ಶನ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಎಂಡಿಸಿಸಿ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ರಚಿಸಿ ದರ್ಶನ್ ಪರ ಘೋಷಣೆ ಕೂಗಲಾಯಿತು.
ಕೂಡಲೇ ಆರೋಪಿಯನ್ನು ಬಂಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಕನ್ನಡ ಚಿತ್ರರಂಗದ ಕಲಾವಿದರ ಮೇಲೆ ಇಂತಹ ಕೃತ್ಯ ನಡೆಯದಂತೆ ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಸಿಲ್ದಾರ್ ರವಿಶಂಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ದರ್ಶನ್ ಅಭಿಮಾನಿಗಳು ಭಾಗಿಯಾಗಿದ್ದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…