Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

ಅನಧಿಕೃತ ಫ್ಲೆಕ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಜೋಡಿರಸ್ತೆಯ ವಿಭಜಕದ ಮೇಲೆ ಯಾರೊಬ್ಬರ ಫ್ಲೆಕ್ಸ್ ಹಾಕಬಾರದು ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಹ ಈ ನಿರ್ದಿಷ್ಟ ಸ್ಥಳದಲ್ಲಿ ಫ್ಲೆಕ್ಸ್ ಹಾಕದಿರುವಂತೆ ನಗರಸಭೆ ಪೌರಾಯುಕ್ತರಿಗೆ ಲಿಖಿತ ಪತ್ರ ನೀಡಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಆದರೂ, ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿ ಅನಧೀಕೃತ ಫ್ಲೆಕ್ಸ್ ಹಾಕಲಾಗುತ್ತಿದೆ. ರಾಜಕೀಉ ಒತ್ತಡಕ್ಕೆ ಪೌರಾಯುಕ್ತರು ಮಣಿದಿದ್ದಾರೆ. ತಕ್ಷಣ ಪೌರಾಯುಕ್ತರು ಎಚ್ಚೆತ್ತು ಫ್ಲೆಕ್ಸ್‌ಗಳನ್ನು ತೆರವು ಮಾಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ನಗರಸಭೆ ಸದಸ್ಯರಾದ ಎಂ.ಮಹೇಶ್, ಕಲೀಲ್ ಉಲ್ಲಾ, ಮಹಮ್ಮದ್ ಅಮೀಕ್, ಇಸ್ರಾರ್ ಪಾಷಾ ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!