ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಜೋಡಿರಸ್ತೆಯ ವಿಭಜಕದ ಮೇಲೆ ಯಾರೊಬ್ಬರ ಫ್ಲೆಕ್ಸ್ ಹಾಕಬಾರದು ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಹ ಈ ನಿರ್ದಿಷ್ಟ ಸ್ಥಳದಲ್ಲಿ ಫ್ಲೆಕ್ಸ್ ಹಾಕದಿರುವಂತೆ ನಗರಸಭೆ ಪೌರಾಯುಕ್ತರಿಗೆ ಲಿಖಿತ ಪತ್ರ ನೀಡಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಆದರೂ, ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿ ಅನಧೀಕೃತ ಫ್ಲೆಕ್ಸ್ ಹಾಕಲಾಗುತ್ತಿದೆ. ರಾಜಕೀಉ ಒತ್ತಡಕ್ಕೆ ಪೌರಾಯುಕ್ತರು ಮಣಿದಿದ್ದಾರೆ. ತಕ್ಷಣ ಪೌರಾಯುಕ್ತರು ಎಚ್ಚೆತ್ತು ಫ್ಲೆಕ್ಸ್‌ಗಳನ್ನು ತೆರವು ಮಾಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ನಗರಸಭೆ ಸದಸ್ಯರಾದ ಎಂ.ಮಹೇಶ್, ಕಲೀಲ್ ಉಲ್ಲಾ, ಮಹಮ್ಮದ್ ಅಮೀಕ್, ಇಸ್ರಾರ್ ಪಾಷಾ ಇತರರಿದ್ದರು.
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…