Mysore
18
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಬಲಿಜ ಸಮುದಾಯವನ್ನು 2ಎ ಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಮೀಸಲಾತಿಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುತ್ತಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಬಲಿಜ ಹಾಗೂ ಇದರ ಉಪಜಾತಿಗೆ ಸೇರಿರುವ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯದಲ್ಲೊಂದಾಗಿದ್ದು, ಈ ಸಮುದಾಯವನ್ನು ಹಿಂದುಳಿದ ಪಟ್ಟಿಯಲ್ಲಿ ಸೇರಿಸಲಾಗಿದೆ. ಅತಿ ಹಿಂದುಳಿದ ಈ ಸಮಾಜವನ್ನು ಹಿಂದುಳಿದ ವರ್ಗದ ೨ಎ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಬಲಿಜ ಸಮುದಾಯಕ್ಕೆ ಸರ್ಕಾರಿ ಉದ್ಯೋಗದಲ್ಲಿ ಸೂಕ್ತ ಮೀಸಲಾತಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ಒದಗಿಸಬೇಕು. ಇತರೆ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವಂತೆ ಕರ್ನಾಟಕ ಬಲಿಜ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಬಲಿಜ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಕೈವಾರ ತಾತಯ್ಯನವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ತರಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಗರ ಸಂಚಾಲಕ ಜೆ.ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಪ್ರತಿಭಟನೆ ನಡೆಸಲಾಯಿತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!