ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು.
ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡಾನೆಗಳ ಹಾವಳಿ ಹೆಚ್ಚಿದ್ದು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ. ಭತ್ತ, ಅಡಕೆ, ಬಾಳೆ, ಕಾಫಿ, ತೆಂಗು ಬೆಳೆಗಳು ಹಾನಿಯಾಗಿವೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳಕ್ಕೆ ಡಿ.ಸಿ.ಎಫ್. ಅವರು ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ, ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ ಫಸಲು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ. ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ದೂರಿದರು.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಯ್ಯ ಭೇಟಿ ನೀಡಿ. ಫೆ.13 ರಂದು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವ್ಲಷಬೇಂದ್ರ, ನಾಗರಾಜ್, ಮಹದೇವಸ್ವಾಮಿ, ನಾಗೇಂದ್ರ, ಅಂಬಳೆ ಮಹದೇವಪ್ಪ, ಶ್ರೀನಿವಾಸ, ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…