ಮೈಸೂರು: ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಹೆಣ್ಣು ಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂ ಶಾಲೆಯನ್ನು ಕೆಡವಿ ಮೈಸೂರಿಗರಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಂಡು ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳವಾರ ನಗರದ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಪುತ್ತಳಿ ಮುಂಭಾಗ ಜವಾವಣೆಗೊಂಡ ಸಮಿತಿ ಸದಸ್ಯರು ಹಾಗೂ ಪ್ರಮುಖರು, ರಾಮಕೃಷ್ಣ ಆಶ್ರಮದವರು ನೀಡಿದ್ದ ವಚನದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.
ಶತವಾನದಷ್ಟು ಹಳೆಯದಾದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅಲ್ಲಿ ಹೊಸದಾಗಿ ಶಾಲೆ ನಿರ್ಮಿಸಿ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸುವುದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದೆವು. ಆದರೀಗ ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತನ್ನು ಉಲ್ಲಂಘಿಸಿ ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಇಂದಿಗೂ ಅವಕಾಶವಿದೆ. ಮಾತಿಗೆ ತಪ್ಪದಂತೆ ಅವರು ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು ಎಂದು ಆಗ್ರಹಿಸಿದರು.
ಸಮಿತಿ ಸಂಚಾಲಕರೂ ಆದ ಕರ್ನಾಟಕ ಕಾವಲುಪಡೆ ಅಧ್ಯಕ್ಷ ಎಂ.ಮೋಹನ್‌ಕುಮಾರ್ ಗೌಡ, ಮಾಜಿ ಮಹಾಪೌರ ಪುರುಷೋತ್ತಮ್, ಟಿ.ರವೀಂದ್ರ, ರವೀಗೌಡ, ಈಶ್ವರ್, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, ಹೊಸೂರು ಕುಮಾರ್, ಯೋಗೇಶ್, ಬಾಲಕಲೃಷ್ಣ ಸಂಗಾಪುರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…