ಜಿಲ್ಲೆಗಳು

ಮುಂದುವರಿದ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ

ಮೈಸೂರು: ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಹೆಣ್ಣು ಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂ ಶಾಲೆಯನ್ನು ಕೆಡವಿ ಮೈಸೂರಿಗರಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಂಡು ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ನಗರದ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‌ ಆವರಣದಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಪುತ್ತಳಿ ಮುಂಭಾಗ ಜವಾವಣೆಗೊಂಡ ಸಮಿತಿ ಸದಸ್ಯರು ಹಾಗೂ ಪ್ರಮುಖರು, ರಾಮಕೃಷ್ಣ ಆಶ್ರಮದವರು ನೀಡಿದ್ದ ವಚನದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.

ಶತವಾನದಷ್ಟು ಹಳೆಯದಾದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅಲ್ಲಿ ಹೊಸದಾಗಿ ಶಾಲೆ ನಿರ್ಮಿಸಿ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸುವುದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದೆವು. ಆದರೀಗ ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತನ್ನು ಉಲ್ಲಂಘಿಸಿ ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಇಂದಿಗೂ ಅವಕಾಶವಿದೆ. ಮಾತಿಗೆ ತಪ್ಪದಂತೆ ಅವರು ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಸಮಿತಿ ಸಂಚಾಲಕರೂ ಆದ ಕರ್ನಾಟಕ ಕಾವಲುಪಡೆ ಅಧ್ಯಕ್ಷ ಎಂ.ಮೋಹನ್‌ಕುಮಾರ್ ಗೌಡ, ಮಾಜಿ ಮಹಾಪೌರ ಪುರುಷೋತ್ತಮ್, ಟಿ.ರವೀಂದ್ರ, ರವೀಗೌಡ, ಈಶ್ವರ್, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, ಹೊಸೂರು ಕುಮಾರ್, ಯೋಗೇಶ್, ಬಾಲಕಲೃಷ್ಣ ಸಂಗಾಪುರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolana

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago