ಜಿಲ್ಲೆಗಳು

ತಾತಯ್ಯ ಪ್ರತಿಮೆ ಮುಂಭಾಗ ಪ್ರತಿಭಟಿಸಿದ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ

ಮೈಸೂರು: ರಾಜಮನೆತನದ ಕೆಂಪನಂಜಮ್ಮಾಣಿ ಅವರು ಹೆಣ್ಣುಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂಎಸ್ ಶಾಲೆಯನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೆ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರ ನಗರದ ನಗರ ಸಾರಿಗೆ ಬಸ್ ನಿಲ್ದಾಣ ಮುಂಬಾಗವಿರುವ ತಾತಯ್ಯ ಅವರ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಸಮಿತಿ ಸದಸ್ಯರು ಹಾಗೂ ಪ್ರಮುಖರು, ರಾಮಕೃಷ್ಣ ಆಶ್ರಮದವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಮನೆತನದವರು ಬಡಮಕ್ಕಳಿಗಾಗಿ ಸ್ಥಾಪಿಸಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಅನೇಕ ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಆದರೂ ಅವರು ತಮ್ಮ ಒಪ್ಪಂದವನ್ನು ಮರೆತಿದ್ದಾರೆ ಎಂದರು.

ದೇಶದ ಒಳಿತಿಗಾಗಿ ತಮ್ಮ ಜೀವನ ಸವೆಸಿದ ತಾತಯ್ಯ ಅವರು, ತಮ್ಮ ಜೀವನದುದ್ದಕ್ಕೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದರು. ವಸತಿ ನಿಲಯಗಳನ್ನು ಸ್ಥಾಪಿಸಿ ಊಟ, ವಸತಿಯನ್ನು ನೀಡಿದರು. ಅವರ ತ್ಯಾಗ ಮನೋಭಾವ, ತತ್ವ, ಆದರ್ಶಗಳು ರಾಮಕೃಷ್ಣ ಆಶ್ರಮದವರ ಮನಸ್ಸಿನ ಮೇಲೆ ಪರಿಣಾಮ ಬೀರಲಿ ಎಂಬ ಉದ್ದೇಶದಿಂದ ನಾವು ಅವರ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಇಂದಿಗೂ ಅವಕಾಶವಿದೆ. ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು. ಇದರಿಂದ ವಿವೇಕಾನಂದಸ್ವಾಮಿ ಅವರ ಆತ್ಮಕ್ಕೂ ಶಾಂತಿ ದೊರಕುತ್ತದೆ ಎಂದು ಹೇಳಿದರು.

ಸಮಿತಿಯ ಸಂಚಾಲಕ ಎಂ.ಮೋಹನ್ ಕುಮಾರ್‌ಗೌಡ, ಮಾಜಿ ಮಹಾಪೌರ ಪುರುಷೋತ್ತಮ್, ರತ್ನಮ್ಮ, ಗೋವಿಂದರಾಜು, ರವೀಗೌಡ, ಕೃಷ್ಣ, ರವಿ, ಬಿ.ಮಹದೇವ್, ಬೆಟ್ಟೇಗೌಡ, ಜಿ.ಪ್ರಕಾಶ್, ಬಾಲಕಲೃಷ್ಣ ಸಂಗಾಪುರ, ಸ್ವಾಮಿ, ಸಿದ್ದಪ್ಪ, ಮುಂತಾದವರು ಹಾಜರಿದ್ದರು.

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago