ಜಿಲ್ಲೆಗಳು

ವೀಕ್ಷಕರಿಗೆ ಪ್ರಾದೇಶಿಕ ಭಾಷೆಯಲ್ಲಿ ಮಾಹಿತಿ ನೀಡಿ : ಸಂಜಯ್‌ ಕುಮಾರ್‌ ಶುಕ್ಲಾ

ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ

ಮೈಸೂರು: ವನ್ಯಪ್ರಾಣಿಗಳ ವೀಕ್ಷಣೆಗಾಗಿ ಮೃಗಾಲಯಗಳಿಗೆ ಬರುವವರಿಗೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮೃಗಾಲಯ ಮತ್ತು ಅಲ್ಲಿನ ಪ್ರಾಣಿ ಸಂರಕ್ಷಣೆ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸಂಜಯ್ ಕುಮಾರ್ ಶುಕ್ಲಾ ಸಲಹೆ ನೀಡಿದರು.
ಶ್ರೀ ಚಾಮರಾಜೇಂದ್ರ ಮೃಗಾಲಯದ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿರುವ ಎರಡು ದಿನಗಳ ಮೃಗಾಲಯ ನಿರ್ದೇಶಕರುಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಉತ್ತಮವಾಗಿ ಆಯೋಜಿಸಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಎರಡು ದಿನಗಳ ಸಮ್ಮೇಳನದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನೇಕ ಸಲಹೆಗಳೂ ಕೇಳಿ ಬಂದಿವೆ. ಆದರೆ, ಸಮ್ಮೇಳನದಲ್ಲಿ ಸಂವಾದಕ್ಕಿಂತ ಗೋಷ್ಠಿಗಳಿಗೆ ಹೆಚ್ಚಿನ ಸಮಯ ಹಿಡಿದಿದೆ. ಸಮ್ಮೇಳನಗಳಲ್ಲಿ ವಿಚಾರಗೋಷ್ಠಿಗಳಿಗಿಂತ ಸಂವಾದ ನಡೆಯುವುದು ಮುಖ್ಯ. ಹೀಗಾಗಿ ಮುಂಬರುವ ದಿನಗಳಲ್ಲಿ ಸಮ್ಮೇಳನವನ್ನು ಮೂರು ದಿನಗಳ ಕಾಲ ಆಯೋಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಮಾತನಾಡಿ, ಯುವಪೀಳಿಗೆಗೆ ವನ್ಯಜೀವಿಗಳ ಬಗ್ಗೆ ತಿಳಿಸುವ ಕೆಲಸವಾಗಬೇಕಿದೆ. ಜತೆಗೆ ವನ್ಯಜೀವಿಗಳ ಮನಸ್ಥಿತಿ ಮತ್ತು ಪ್ರೀತಿಸುವ ಬಗ್ಗೆ ಅರಿವು ಮೂಡಿಸಬೇಕಿದೆ. ಸಿಎಸ್‌ಆರ್ ನಿಧಿ ಮತ್ತು ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಚಾಮರಾಜೇಂದ್ರ ಮೃಗಾಲ ಯದಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಹೊಸ ಮೃಗಾಲಯ ಆರಂಭಗೊಂಡಿದೆ ಎಂದು ತಿಳಿಸಿದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago