ಜಿಲ್ಲೆಗಳು

ವೀರ ಯೋಧ ಪ್ರಾಂಜಲ್‌ಗೆ ಸಾರ್ವಜನಿಕರ ಅಂತಿಮ ನಮನ

ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ನಂದನವನ ಬಡಾವಣೆಯ ಅವರ ನಿವಾಸದ ಬಳಿ ಬೆಳಗ್ಗೆ ೭ರಿಂದ ೧೦ ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ ೧೦.೩೦ಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಾಂಜಲ್‌ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

೧೧.೩೦ರವರೆಗೆ ಮನೆಯ ಬಳಿ ಎಲ್ಲಾ ವಿಧಿ-ವಿಧಾನಗಳು ಮುಗಿದ ನಂತರ, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ, ಕಲ್ಲುಬಾಳು ಕ್ರಾಸ್‌, ಜಿಗಣಿ ಒಟಿಐಎಸ್‌ ವೃತ್ತ, ಉಡುಪಿ ಗಾರ್ಡನ್‌ ರಿಂಗ್‌ ರೋಡ್‌, ಪೊಪ್ಪ ಗೇಟ್‌ ಮೂಲಕ ಸಾಗಿ ನೈಸ್‌ ರಸ್ತೆಗೆ ತಲುಪಲಿದೆ. ಬಳಿಕ ಕೂಡ್ಲು ವಿದ್ಯುತ್‌ ಚಿತಾಗಾರಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಸೇನಾ ಗೌರವದ ನಂತರ ಅಂತಿಮ ವಿದಿ-ವಿಧಾನಗಳನ್ನು ನೆರವೇರಿಸಲಾಗುತ್ತದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

14 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

14 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

16 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

18 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

21 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago