ಜಿಲ್ಲೆಗಳು

ಪುನೀತ್ ಸ್ಮರಣೆ; ನಾಳೆ ನೇತ್ರದಾನ ಶಿಬಿರ

ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಹೈ ಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದ್ದಾರೆ.

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಕನ್ನಂಡ ಕವಿತ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕಡಗದಾಳು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯರಾದ ಎಂ.ಜೆ.ಗಂಗಮ್ಮ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ನೇತ್ರದಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೃಪಾಲಿನಿ ಅಯ್ಯಪ್ಪ, ರಕ್ತನಿಧಿ ವಿಭಾಗದ ಮೆಡಿಕಲ್ ಆಫಿಸರ್ ಡಾ.ಕೆ.ಪಿ.ಕರುಂಬಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಮೊದಲಾದವರು ಉಪಸ್ಥಿತರಿರುವರು.

andolana

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

7 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago