ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಹೈ ಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಕನ್ನಂಡ ಕವಿತ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕಡಗದಾಳು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯರಾದ ಎಂ.ಜೆ.ಗಂಗಮ್ಮ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ನೇತ್ರದಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೃಪಾಲಿನಿ ಅಯ್ಯಪ್ಪ, ರಕ್ತನಿಧಿ ವಿಭಾಗದ ಮೆಡಿಕಲ್ ಆಫಿಸರ್ ಡಾ.ಕೆ.ಪಿ.ಕರುಂಬಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಮೊದಲಾದವರು ಉಪಸ್ಥಿತರಿರುವರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…