ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ.
ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್‌ರಾಜ್
ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ
ಅಜರಾಮರರಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಜಯಪುರದಲ್ಲಿ ವಿನಾಯಕ ಗೆಳೆಯರ ಬಳಗ ಹಾಗೂ
ಸಿದ್ದೇಗೌಡರ ಅಭಿಮಾನಿ ಬಳಗದ ವತಿಯಿಂದ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್‌ರಾಜ್ ಕುಮಾರ್ ಅವರ ಅಪ್ಪಟ ಅಭಿವಾನಿ, ರಾಜ್‌ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾ ಜನರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಪುನೀತ್‌ರಾಜ್‌ಕುಮಾರ್ ಅವರು ಸಹ ತಂದೆಯಂತೆ
ಉತ್ತಮ ಕಲಾವಿದರಾಗಿ ಈ ನಾಡಿಗೆ ಸಂದೇಶ ಕೊಡುವಂತಹ ಸಿನಿಮಾಗಳಲ್ಲಿ ಅಭಿನಯಿಸಿ ರಾಜ್ಯ,
ರಾಷ್ಟ್ರ ಪ್ರಶಸ್ತಿ ಗಳಿಸಿ ಎಲೆಮರೆಯ ಕಾಯಿಯಂತೆ ಸಾಮಾಜಿಕ ಸೇವೆ ಮಾಡುತ್ತ ಕಿರಿಯ ವಯಸ್ಸಿನಲ್ಲಿಯೇ
ಅಗಲಿರುವುದು ನಮ್ಮನ್ನು ಕಾಡುತ್ತಿದೆ. ಪುನೀತ್‌ರಾಜ್‌ಕುಮಾರ್ ಮತ್ತೊಮ್ಮೆ ಈ
ಭೂಮಿ ಮೇಲೆ ಹುಟ್ಟಿಬರಲಿ ಎಂದರು.
ಸಮಾರಂಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಕೆಂಪನಾಯಕ
ಶ್ರೀರಾಂಪುರ ರಮೇಶ್, ಸೋಮಣ್ಣ, ನಾಗೇಶ್, ನೂರಾರು ಅಭಿಮಾನಿಗಳು
ಹಾಜರಿದ್ದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…