ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಪ್ಪು ನಮನ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜಕುಮಾರ್ ವಂಶಸ್ಥರಿಗೂ ಸಿಂಗನಲ್ಲೂರು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇರುವ ಕಾರಣದಿಂದ ಮತ್ತು ರಾಜಕುಮಾರ್ ತಂದೆಯವರ ಹುಟ್ಟೂರು ಇದಾಗಿರುವುದರಿಂದ ಈ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅತಿ ಚಿಕ್ಕ ವಯಸ್ಸಿನಲ್ಲಿ ಅಪಾರ ಜನ ಸೇವೆ ಮಾಡಿ ಸಾಧನೆ ಮಾಡಿದ ಪುನೀತ್ ರಾಜಕುಮಾರ್ ರವರ ಆದರ್ಶಗಳು ಎಂದೆಂದಿಗೂ ಸ್ಮರಣೀಯವಾದುದು ಎಂದರು.
ಸಂಜೆ ವೇದಿಕೆ ಕಾರ್ಯಕ್ರಮ ಇದ್ದು, ಇಲ್ಲಿನ ಸ್ಥಳೀಯ ಶಾಲಾ ಮಕ್ಕಳಿಂದ ಪುನೀತ್ ಅಭಿನಯದ ಚಿತ್ರದ ಹಾಡುಗಳಿಗೆ ನೃತ್ಯ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಿರು ಕಿರುತೆರೆ ಕಲಾವಿದರಾದ ಗಿಚ್ಚಿ ಗಿಲಿ ಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುನೀತ್ ರವರಿಗೆ ನುಡಿ ನಮನ ಸಲ್ಲಿಸಬೇಕಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಜೆಡಿಎಸ್ ಮುಖಂಡರಾದ ಮಂಜೇಶ್, ಶಿವಮೂರ್ತಿ, ಬಾಬಣ್ಣ ಮುಂತಾದವರು ಹಾಜರಿದ್ದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…