ಚಾಮರಾಜನಗರ: ಕಾಡಾನೆಗೆ ಕಬ್ಬು ನೀಡಿದ ಲಾರಿಯ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂ. ದಂಡ ಹಾಕಿದೆ!ನಂಜನಗೂಡು ತಾಲ್ಲೂಕಿನ ಸಿದ್ದರಾಜು ದಂಡತೆತ್ತ ಚಾಲಕ ಎಂದು ಗುರುತಿಸಲಾಗಿದೆ.
ಚಾಮರಾಜನಗರ ಗಡಿಗೆ ಸೇರಿದ ತಮಿಳುನಾಡಿನ ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಡಿ. 3ರಂದು ಈ ಪ್ರಕರಣ ನಡೆದಿದೆ.
ಕರೆಪಳ್ಳಂ ಚೆಕ್‌ಪೋಸ್ಟ್ ಸನಿಹದ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾಡಾನೆಗೆ ನೀಡಲು ಲಾರಿಯಿಂದ ಚಾಲಕ ಕಬ್ಬು ತೆಗೆದುಕೊಂಡು ಹೋಗಿದ್ದು
ಗಸ್ತಿನ ಮೇಲಿದ್ದಅರಣ್ಯ ಇಲಾಖೆ ಸಿಬ್ಬಂದಿಗೆ ಕಂಡು ಬಂದಿತು. ಈಸಂದರ್ಭದಲ್ಲಿ ವಿಚಾರಣೆ ಮಾಡಿದಾಗ ಕಬ್ಬನ್ನು ಆನೆಗೆ ನೀಡಿದ್ದಾಗಿ ಚಾಲಕ ಒಪ್ಪಿಕೊಂಡರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಹಾಸಸೂರು ವನಕೊಟ್ಟಂ ಅರಣ್ಯ ಅಧಿಕಾರಿ ಆದೇಶದಂತೆ ಸಿದ್ದರಾಜು ಅವರಿಂದ 75 ಸಾವಿರ ರೂ. ದಂಡದ ಶುಲ್ಕ ಕಟ್ಟಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಲ್ಲಿನ ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಕ್ಷಿತಾರಾಣ್ಯಗಳಲ್ಲಿ ವಾಹನಗಳನ್ನು ನಿಲ್ಲಿಸುವುದು ಹಾಗೂ ವನ್ಯಪ್ರಾಣಿಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧವಿದೆ. ಜಿಲ್ಲೆಯ ಬಿಆರ್ ಟಿಯಲ್ಲಿಯೂ ಪ್ರಾಣಿಗಳಿಗೆ ಆಹಾರ ನೀಡಿದ್ದಕ್ಕೆ ತ್ಯಾಜ್ಯ ಬಿಸಾಡಿದ್ದಕ್ಕೆ ಮತ್ತು ರಕ್ಷಿತಾರಣ್ಯದಲ್ಲಿ ವಾಹನ ನಿಲ್ಲಿಸಿದ್ದಕ್ಕೆ 2ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಅಲ್ಪ ಪ್ರಮಾಣದಲ್ಲಿ ದಂಡ ಹಾಕಿ ಎಚ್ಚರಿಕೆ ನೀಡಲಾಗಿತ್ತು.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…