ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು ನೆನೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27 ಮೂರು ದಿನಗಳ ಕಾಲ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಪುನೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇಲುಕೋಟೆ ಶಾಸಕ ಪುಟ್ಟರಾಜು ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ. ಡಾ. ರಾಜ್ ಕುಟುಂಬದ ಮಾರ್ಗದರ್ಶನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ಪಾಂಡವಪುರ ಜನತೆಗೆ ಭರಪೂರ ಮನರಂಜನೆ ಸಿಗಲಿದೆ.
ಈ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಸೇರಿದಂತೆ ರಾಜ್ ಕುಟುಂಬದ ಬಹುತೇಕ ಸದಸ್ಯರು ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಯಾಂಡಲ್‌ವುಡ್‌ನ ಖ್ಯಾತ ನಟ-ನಟಿಯರು ಆಗಮಿಸುತ್ತಿದ್ದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಜೊತೆಗೆ ಖ್ಯಾತ ಗಾಯಕರಾದ (Singers) ವಿಜಯ ಪ್ರಕಾಶ್, ಅನನ್ಯ ಭಟ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂರು ದಿನಗಳ ಕಾಲ ಮ್ಯೂಸಿಕಲ್ ನೈಟ್ (ಸಂಗೀತ ರಾತ್ರಿ) ನಡೆಸಿಕೊಡಲಿದ್ದಾರೆ.
ಪುನೀತೋತ್ಸವ on 25,26,and27 in ಪಾಂಡವಪುರ #DrPuneethRajkumar#appuforever #appuliveson #AppuKichcha pic.twitter.com/UPERKJiwhy
— Shiva Shankar Gowda (@ShivaSh28258113) November 18, 2022