ಜಿಲ್ಲೆಗಳು

ಪಾಂಡವಪುರದಲ್ಲಿ 3 ದಿನಗಳ ಕಾಲ ಪುನಿತೋತ್ಸವ ಆಚರಣೆ

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು ನೆನೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27 ಮೂರು ದಿನಗಳ‌ ಕಾಲ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಪುನೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇಲುಕೋಟೆ ಶಾಸಕ ಪುಟ್ಟರಾಜು ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ. ಡಾ. ರಾಜ್ ಕುಟುಂಬದ ಮಾರ್ಗದರ್ಶನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ಪಾಂಡವಪುರ ಜನತೆಗೆ ಭರಪೂರ ಮನರಂಜನೆ ಸಿಗಲಿದೆ.

ಈ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಸೇರಿದಂತೆ ರಾಜ್ ಕುಟುಂಬದ ಬಹುತೇಕ ಸದಸ್ಯರು ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಯಾಂಡಲ್‌ವುಡ್‌ನ ಖ್ಯಾತ ನಟ-ನಟಿಯರು ಆಗಮಿಸುತ್ತಿದ್ದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಜೊತೆಗೆ ಖ್ಯಾತ ಗಾಯಕರಾದ (Singers) ವಿಜಯ ಪ್ರಕಾಶ್, ಅನನ್ಯ ಭಟ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂರು ದಿನಗಳ ಕಾಲ ಮ್ಯೂಸಿಕಲ್ ನೈಟ್ (ಸಂಗೀತ ರಾತ್ರಿ) ನಡೆಸಿಕೊಡಲಿದ್ದಾರೆ.

 

 

andolana

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago