ಕೋಟೆಕೆರೆ ಗ್ರಾಪಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ
ಬೇಗೂರು(ಗುಂಡ್ಲುಪೇಟೆ ತಾ.): ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮೀಪದ ಕೋಟೆಕೆರೆ ಗ್ರಾಮಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಸಮಾವೇಶಗೊಂಡ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಮೆರವಣಿಗೆ ನಡೆಸಿ, ನಂತರ ಗ್ರಾಪಂ ಕಚೇರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಕಾಡಂಚಿನ ಗ್ರಾಮಗಳಿಗೆ ಕಾಡಾನೆ ಜಿಂಕೆ, ಕರಡಿ, ಚಿರತೆ ಸೇರಿದಂತೆ ಮತ್ತಿತರ ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು ಬೆಳೆಗಳನ್ನು ಹಾಳುಮಾಡುತ್ತಿವೆ. ಜೊತೆಗೆ ಸೂಕ್ತ ಪರಿಹಾರವೂ ಸಿಗುತ್ತಿಲ್ಲ. ರಾತ್ರಿವೇಳೆ ವಾಚರ್‌ಗಳು ಗಸ್ತು ತಿರುಗದೆ ಇರುವುದರಿಂದ ಕಾಡಾನೆಗಳು ಜಮೀನಿನತ್ತ ಧಾವಿಸಿ ಬೆಳೆಗಳನ್ನೆಲ್ಲ ತಿಂದುಹಾಕುತ್ತಿವೆ ಎಂದು ಆರೋಪಿಸಿದರು.
ರೈತರ ನೀರಾವರಿ ಜಮೀನಿಗೆ ಟಿ.ಸಿ.ದುರಸ್ತ್ತಿಗೆ 10 ರಿಂದ 15 ದಿನ ಕಾಯಿಸುವುದರಿಂದ ಬೆಳೆ ಒಣಗಿಹೋಗುತ್ತದೆ. ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಓ ಅವರು ಗ್ರಾಮಕ್ಕೆ ಸೌಲಭ್ಯವನ್ನು ಒದಗಿಸುವಲ್ಲಿ ನಿರ್ಲಕ್ಷಿಸುತ್ತಿದ್ದಾರೆ. ಚರಂಡಿ, ರಸ್ತೆ, ಕುಡಿಯುವ ನೀರಿನ ಕೈ ಬೋರ್‌ಗಳು ಹದಗೆಟ್ಟಿದ್ದರೂ ದುರಸ್ತಿಪಡಿಸುತ್ತಿಲ್ಲ ಎಂದು ಆರೋಪಿಸಿದರು.
ಇ-ಸ್ವತ್ತು ನೀಡಲು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಗಣರಾಜ್ಯೋತ್ಸವದಲ್ಲಿ ಭ್ರಷ್ಟರು ಧ್ವಜಾರೋಹಣ ನೆರವೇರಿಸಬಾರದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಜಿಲ್ಲಾ ಕಾರ್ಯಾಧ್ಯಕ್ಷ ಮಹದೇವಪ್ಪ, ಕೋಟೆಕೆರೆ ಗ್ರಾಮ ಘಟಕದ ಅಧ್ಯಕ್ಷ ಮಹದೇವವನಾಯಕ ಪಿ.ಎಸ್.ಐ. ಜಗದೀಶದೂಳಶೆಟ್ಟಿ, ಉಪಾಧ್ಯಕ್ಷ ಸಿದ್ದರಾಜು, ಸೀನಾ, ಮಹದೇವನಾಯಕ ಹಾಗೂ ರೈತಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…