ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ನಾಡಗೀತೆ ಮೂಲಕ ಗೌರವ ಸಲ್ಲಿಸಲಾಯಿತು.
ಕನ್ನಡ ಭಾವುಟ ಹಿಡಿದು ಗಮನ ಸೆಳೆದ ಪುಟಾಣಿಗಳು : ಕಾರ್ಯಕ್ರಮದ ಅಂಗವಾಗಿ ಆರ್.ಎಸ್.ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಕನ್ನಡ ‘ಹಳದಿ ಕೆಂಪು ‘ ವರ್ಣನೆಗಳನ್ನೋಳಗೊಂಡ ಕನ್ನಡ ಭಾವುಟವನ್ನು ಹಿಡಿದು ಶಿಸ್ತಿನ ಸಿಪಾಯಿಗಳಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಲ್ಲಿನ ಶಿಕ್ಷಕರು ಕನ್ನಡ ಧ್ವಜ ಬಣ್ಣಗಳನ್ನು ಒಳಗೊಂಡ ಉಡುಗೆಯಲ್ಲಿ ಕಾಣಿಕೊಂಡಿದ್ದು ವಿಶೇಷವಾಗಿತ್ತು.
ಗ್ರಾಮಸ್ಥರ ಕನ್ನಡ ಪ್ರೇಮ: ಕನ್ನಡ ನಾಡು ನುಡಿ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿರುವ ಆರ್. ಎಸ್.ದೊಡ್ಡಿ ಗ್ರಾಮಸ್ಥರು ಗ್ರಾಮದ ಧಾರ್ಮಿಕ ಪುಣ್ಯಸ್ಥಳದಲ್ಲಿ ಕನ್ನಡಾಂಬೆಯ ವೇದಿಕೆಯನ್ನು ನಿರ್ಮಾಣ ಮಾಡಿ, ಪ್ರತಿ ವರ್ಷವೂ ಕನ್ನಡಕ್ಕೆ ಗೌರವ ಸಲ್ಲಿಸುವ ಕೆಲಸವನ್ನು ಮಾಡುತ್ತ ಬಂದಿರುವುದು ಅನುಕರಣಿಯವಾಗಿದೆ.
ಕಾರ್ಯಕ್ರಮದಲ್ಲಿ ಆರ್. ಎಸ್. ದೊಡ್ಡಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…