ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಹೇಂದ್ರ ಸಮೀಪದ ಬಿದರಹಳ್ಳಿ ಗ್ರಾಮದವರು. ಇವರಲ್ಲಿನ ಕ್ರೀಡೆಯಲ್ಲಿನ ಆಸಕ್ತಿಯನ್ನು ಗುರುತಿಸಿ ದೈಹಿಕ ಶಿಕ್ಷಕ ರಮೇಶ್‌ರವರು ಹಾಗೂ ಶಾಲೆಯ ಮುಖ್ಯ ಶಿಕ್ಷಕ ನಾಗಣ್ಣ ಪ್ರೋತ್ಸಾಹಿಸಿದ ಪರಿಣಾಮ ಜಿಲ್ಲಾಮಟ್ಟದ 800 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಇದೇ ಶಾಲೆಯಿಂದ ಐವರು ವಿದ್ಯಾರ್ಥಿನಿಯರು ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು.
ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…