ಜಿಲ್ಲೆಗಳು

ರಾಹುಲ್‌ ಗಾಂಧಿ ಜನಪ್ರಿಯತೆ ಸಹಿಸದ ಬಿಜೆಪಿ ದುರುದ್ದೇಶ ತಂತ್ರವನ್ನು ರೂಪಿಸುತ್ತಿದೆ : ಶಾಸಕ ಆರ್‌ ನರೇಂದ್ರ ಕಿಡಿ

ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ, ನಿರುದ್ಯೋಗದ ಸಮಸ್ಯೆಯನ್ನು ಹೊಗಲಾಡಿಸುವ ಸಲುವಾಗಿ ಬೆಲೆ ಏರಿಕೆಯ ಬಗ್ಗೆ ಜನರಲ್ಲಿ ಅರಿವು ಮೂಢಿಸುವ ಸಲುವಾಗಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕೇರಳಕ್ಕೆ ಆಗಮಿಸುವ ರಾಹುಲ್‍ಗಾಂಧಿ ಅವರಿಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸಾವಿರ ಕಾರ್ಯಕರ್ತರು ಭಾಗವಹಿಸುವುದರ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆಗಾಗಿ ಕಾಂಗ್ರೆಸ್‍ಗೆ ಕೆಟ್ಟ ಹೆಸರನ್ನು ತರುವ ಉದ್ಧೇಶದಿಂದ ಇನ್ನಿಲ್ಲದ ಸಂಚುಗಳನ್ನು ರೂಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‍ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago