ಮೈಸೂರು : ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು ಬಿಡುವಿನ ಸಮಯದಲ್ಲಿ ಶ್ರೀರಂಗಪಟ್ಟಣದ ಬಳಿಯಿಂದ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು ಅವರೊಟ್ಟಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗಿದ್ದರು.
ಕೊಡಗಿನಲ್ಲಿ ವಿಶ್ರಾಂತಿ ಪಡೆಯುವುದಕ್ಕಾಗಿ ಬರುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿರುವ ರಾಹುಲ್ ಗಾಂಧಿ ಅವರು ಬಡಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ, ಅಲ್ಲಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ.





