ಹನೂರು: 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಜೊತೆಗೆ ರಾಷ್ಟ್ರೀಯ ನಾಯಕ ರಾಹುಲ್‍ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ ಉದ್ಯೋಗ ಸೃಷ್ಠಿ ಹಾಗೂ ಭಾರತ್ ಜೋಡೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಗಳಿಸಿದೆ. ಅಲ್ಲದೇ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯವನ್ನು ತಂದು ಕೊಡುವಲ್ಲಿ ಶ್ರಮಿಸಿರುವ ಶ್ರಮ ಅಪಾರ. ಆದರೆ ಬಿಜೆಪಿ ಪಕ್ಷ ಜಾತಿ ಜಾತಿಯ ನಡುವೆ ವಿಷ ಬೀಜವನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದ್ದು, ಸಮಾಜದಲ್ಲಿ ಅಶಾಂತಿಯನ್ನು ತಂದೋಡ್ಡುತ್ತಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡುತ್ತೇನೆಂದು ಭರವಸೆ ನೀಡದ್ದರು. ಆ ಭರವಸೆ ಸುಳ್ಳಾಗಿದೆ. ಇನ್ನು ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಇದರಿಂದ ಜನತೆಗೆ ಉತ್ತಮ ಆಡಳಿತವನ್ನು ನೀಡಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಈಗಾಗಲೇ ಜನರಿಗೆ ಮನದಟ್ಟಾಗಿದೆ. ಈತನ್ಮಧ್ಯೆ ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಆಗಾಗಿ 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಹನೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್ ಮಾತನಾಡಿ, ವಿದ್ಯಾವಂತ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ‘ಉದ್ಯೋಗ ಸೃಷ್ಟಿ, ಇನ್’ ವೆಬ್ ತೆರೆಯಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಸರನ್ನು ನೊಂದಾಯಿಸಿಕೊಳ್ಳುವುದರ ಮೂಲಕ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಸಮಿತಿ ರಾಜ್ಯ ಉಪಾಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ವಿಜಯ ಆನಂದ್, ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್, ಜಿಲ್ಲಾ ಉಸ್ತುವಾರಿ ಇರ್ಷಾದ್ ಖಾನ್, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ರಾಮಾಪುರ ಕಾಂಗ್ರೆಸ್ ಯೂತ್ ಸಮಿತಿ ಅಧ್ಯಕ್ಷ ಸುರೇಶ್, ಗ್ರಾಪಂ ಅಧ್ಯಕ್ಷೆ ಶಾಂತಿ, ಉಪಾಧ್ಯಕ್ಷ ರಾಮಲಿಂಗಂ, ಸದಸ್ಯರು ಹಾಗೂ ಇನ್ನಿತರರು ಇದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…