ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು ಹಣದ ಆಮಿಷ ಒಡ್ಡಿ ಕರೆಯಿಸಿಕೊಂಡು ಅವರನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದವರನ್ನು ಬಂಧಿಸಲಾಗಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಪಿ ಎಂ.ಎಸ್. ಗೀತಾ, ಸಿಸಿಬಿ ಎಸಿಪಿ ಸಿ.ಕೆ.ಅಶ್ವತನಾರಾಯಣ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಎ.ಮಲ್ಲೇಶ, ಆಲನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ಶ್ರೀಕಾಂತ್, ಪಿ.ಎಸ್.ಐಪ್ರತಿಭಾ ಜಂಗವಾಡ ಸಿಬ್ಬಂದಿಗಳಾದ ರಾಜು.ಆರ್, ಎ.ಎಸ್.ಐ., ಕೆ.ಜಿ. ಶ್ರೀನಿವಾಸ್, ರಾಧೇಶ್ ಮತ್ತುಎನ್.ಜಿ.ಮಮತ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.





