ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು ಹಣದ ಆಮಿಷ ಒಡ್ಡಿ ಕರೆಯಿಸಿಕೊಂಡು ಅವರನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದವರನ್ನು ಬಂಧಿಸಲಾಗಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಪಿ ಎಂ.ಎಸ್. ಗೀತಾ, ಸಿಸಿಬಿ ಎಸಿಪಿ ಸಿ.ಕೆ.ಅಶ್ವತನಾರಾಯಣ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಎ.ಮಲ್ಲೇಶ, ಆಲನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ಶ್ರೀಕಾಂತ್, ಪಿ.ಎಸ್.ಐಪ್ರತಿಭಾ ಜಂಗವಾಡ ಸಿಬ್ಬಂದಿಗಳಾದ ರಾಜು.ಆರ್, ಎ.ಎಸ್.ಐ., ಕೆ.ಜಿ. ಶ್ರೀನಿವಾಸ್, ರಾಧೇಶ್ ಮತ್ತುಎನ್.ಜಿ.ಮಮತ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…