ಹನೂರು : ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದಟ್ಟಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ಮನೆಯ ಛಾವಣಿ ಹಾಗೂ ಗೋಡೆ ಕುಸಿದು ಹಾನಿಯಾಗಿದೆ.
ರಾತ್ರಿ ಸುರಿದ ಜೋರು ಮಳೆಗೆ ಉದ್ಧಟ್ಟಿ ಗ್ರಾಮದ ಕುಮಾರ್ ಎಂಬವರಿಗೆ ಸೇರಿದ ಮನೆಯ ಛಾವಣಿ ಹಾಗೂ ಗೋಡೆ ಸಂಪೂರ್ಣ ಕುಸಿದಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿವೆ. ಇನ್ನೂ ಹೊಸದೊಡ್ಡಿ ಗ್ರಾಮದಲ್ಲಿ ರಾತ್ರಿ ಸುರಿದ ಮಳೆಗೆ ಭಾನುವಾರ ಬೆಳಿಗ್ಗೆ ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಛಾವಣಿ ಹಾಗೂ ಗೋಡೆ ಕುಸಿದಿದೆ.
ಇದರಿಂದ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಸಂತ್ರಸ್ಥರು ಒತ್ತಾಯಿಸಿದ್ದಾರೆ.