ಜಿಲ್ಲೆಗಳು

ಮಳೆಗೆ ಮನೆ ಗೋಡೆ ಕುಸಿತ ಪರಿಹಾರಕ್ಕಾಗಿ ಆಗ್ರಹ

ಹನೂರು : ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದಟ್ಟಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ಮನೆಯ ಛಾವಣಿ ಹಾಗೂ ಗೋಡೆ ಕುಸಿದು ಹಾನಿಯಾಗಿದೆ.
ರಾತ್ರಿ ಸುರಿದ ಜೋರು ಮಳೆಗೆ ಉದ್ಧಟ್ಟಿ ಗ್ರಾಮದ ಕುಮಾರ್ ಎಂಬವರಿಗೆ ಸೇರಿದ ಮನೆಯ ಛಾವಣಿ ಹಾಗೂ ಗೋಡೆ ಸಂಪೂರ್ಣ ಕುಸಿದಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿವೆ. ಇನ್ನೂ ಹೊಸದೊಡ್ಡಿ ಗ್ರಾಮದಲ್ಲಿ ರಾತ್ರಿ ಸುರಿದ ಮಳೆಗೆ ಭಾನುವಾರ ಬೆಳಿಗ್ಗೆ ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಛಾವಣಿ ಹಾಗೂ ಗೋಡೆ ಕುಸಿದಿದೆ.
ಇದರಿಂದ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಸಂತ್ರಸ್ಥರು ಒತ್ತಾಯಿಸಿದ್ದಾರೆ.

andolanait

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

11 mins ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

1 hour ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 hours ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

2 hours ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

3 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

3 hours ago