ಜಿಲ್ಲೆಗಳು

ಸತತ ಮಳೆಯಿಂದಾಗಿ ಕೊಚ್ಚಿಹೋದ ಆದಿವಾಸಿ ಪೋಡು ಸಂಪರ್ಕದ ರಸ್ತೆಗಳು

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವತ್ತೂರಿನಿಂದ ಆದಿವಾಸಿ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ನೆಲ್ಲಿಕತ್ರಿ, ಕೆರೆದಿಂಬ, ಗೊಂಬೆಗಲ್ಲು ಕಡಕಲಕಂಡಿ, ಹೊನ್ನ ಮೇಟಿ, ಅತ್ತಿಖಾನೆ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ 1ವಾರದಿಂದ ಬೀಳುತ್ತಿರುವ ಸತತ ಮಳೆಗೆ ಕೊಚ್ಚಿ ಹೋಗಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.


ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಪಾದಚಾರಿಗಳಿಗೂ ಸಹ ಸಂಚರಿಸಲು ಕಷ್ಟವಾಗಿದೆ.ಯಾವುದಾದರೂ ಘಟನೆಗಳು ಜರುಗಿದರೆ ಡೋಲಿ ಕಟ್ಟಿಕೊಂಡು ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ನೆಲ್ಲಿಕತ್ರಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

andolanait

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

39 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

3 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago