ಜಿಲ್ಲೆಗಳು

ಭಾರಿ ಮಳೆ ಹಾಗೂ ಬೆಳೆ ಹಾನಿ ಸ್ಥಳಕ್ಕೆ ಶಾಸಕರ ಭೇಟಿ ಪರಿಶೀಲನೆ.

ಮೈಸೂರು : ಕಳೆದ ಒಂದೂವರೆ ತಿಂಗಳಿಂದ ಸತತವಾಗಿ ಭಾರಿ ಮಳೆಯಾಗಿ ನದಿಯಿಂದಾಗಿ ವರುಣ ಕ್ಷೇತ್ರದ ಹಲವೆಡೆ ಸಾಕಷ್ಟು ಹಾನಿ ಉಂಟಾಗಿದ್ದು ಈ ಸಂಬಂಧ ಇಂದು ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಬೆಳೆಗಳು ಹಾಗೂ ಗ್ರಾಮಗಳಲ್ಲಿ ಮನೆಗಳು ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಕುಸಿತಗೊಂಡಿರುವ ಮನೆಗಳನ್ನು ವೀಕ್ಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮನೆ, ಬೆಳೆಗಳನ್ನು ಕಳೆದುಕೊಂಡ ಸಾಕಷ್ಟು ಜನರು  ರೈತರ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಕಬಿನಿ ನದಿ ಪ್ರವಾಹದಲ್ಲಿ ರೈತರ ಬೆಳೆ ಹಾನಿಯ ಸ್ಥಳಗಳಿಗೆ ಭೇಟಿ ನೀಡಿದ್ದರು.

ಪರಿಹಾರ ಕೇಳಿ ಅರ್ಜಿ ಸಲ್ಲಿಸುತ್ತಿರುವುದು

ವರುಣ ಕ್ಷೇತ್ರದ ಸುತ್ತೂರು. ಆಲತ್ತೂರು. ಮಾಡಳ್ಳಿ. ಹೊಸಕೋಟೆ. ನಂದು ಗುಂದ. ಕುಪ್ಪೇಗಾಲ. ಸಿದ್ದರಾಮಹುಂಡಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರ ಜಮೀನುಗಳಿಗೆ, ಬೆಳೆ,ಮನೆಗಳನ್ನು ಪರಿಶೀಲಿಸಿದ್ದಾರೆ.

ಮಳೆಯಿಂದಾಗಿ ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಶ್ರೀಘ್ರದಲ್ಲಿ ಪರಿಹಾರ ದೊರಕಿಸಿಕೊಡಲು ಸರ್ಕಾರವನ್ನು ಒತ್ತಾಯಮಾಡಿ  ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸ್ಥಳದಲ್ಲಿದ್ದ ಅಧಿಕಾರಿಗಳಾದ ಸಹಾಯಕ ಕೃಷಿ ನಿರ್ದೇಶಕರಾದ ದೀಪಕ್ ಅವರಿಗೆ ರೈತರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ. ಎಸ್ಸಿ ಬಸವರಾಜ್. ಬ್ಲಾಕ್ ಅಧ್ಯಕ್ಷರಾದ. ರಂಗಸ್ವಾಮಿ, ರೈತ ಮುಖಂಡರಾದ. ಚಿಕ್ಕು ಸು. ಮಹದೇವಮ್ಮ. ಮಹೇಶ್. ಕೆಎಸ್ ಉಂಡಿ ರವಿ, ತಾಲ್ಲೂಕಿನ ಇತರ ಅಧಿಕಾರಿಗಳು ಹಾಜರಿದ್ದರು. ಸುತ್ತಮುತ್ತ ಗ್ರಾಮಗಳ ರೈತರು ಹಾಜರಿತ್ತು.

andolanait

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

3 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

3 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

3 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

3 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

15 hours ago