Mysore
21
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

15 ದಿನದ ಮಳೆಯಿಂದಾಗಿ 100 ಕೋಟಿ ರೂ ನಷ್ಟ : ಜಿಟಿಡಿ

ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ ಬಗ್ಗೆ ಸೂಕ್ತವಾದ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. 

ಮುಂದುವರಿದು ನಮ್ಮ ವ್ಯಾಪ್ತಿಯಲ್ಲಿ ಸಾಕಷ್ಟು  ಕೆರೆಗಳು ತುಂಬಿದ್ದು, ಬಹುತೇಕ ಕೆರೆಗಳು ಕೋಡಿ ಬಿದ್ದಿವೆ ಇದರಿಂದಾಗಿ ಹಲವಾರು ಬಹುಪಾಲು ಕೃಷಿ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಮಳೆಯಿಂದಾಗಿ ಸುಮಾರು 35 ಮನೆಗಳು ಹಾನಿಯಾಗಿವೆ, ಈ ಹಾನಿಯನ್ನು ಕುರಿತ ಮಾಹಿತಿಯನ್ನು ಸ್ಥಳೀಯ ಆಡಳಿತವು ಸಂಗ್ರಹ ಮಾಡುತ್ತಿದ್ದು, ಅಗತ್ಯ ಪರಿಹಾರವನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ  ಗೌತಮ್‌, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ತಹಶೀಲ್ದಾರ್‌ ಗಿರೀಶ್‌ ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!