ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ ಬಗ್ಗೆ ಸೂಕ್ತವಾದ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂದುವರಿದು ನಮ್ಮ ವ್ಯಾಪ್ತಿಯಲ್ಲಿ ಸಾಕಷ್ಟು ಕೆರೆಗಳು ತುಂಬಿದ್ದು, ಬಹುತೇಕ ಕೆರೆಗಳು ಕೋಡಿ ಬಿದ್ದಿವೆ ಇದರಿಂದಾಗಿ ಹಲವಾರು ಬಹುಪಾಲು ಕೃಷಿ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಮಳೆಯಿಂದಾಗಿ ಸುಮಾರು 35 ಮನೆಗಳು ಹಾನಿಯಾಗಿವೆ, ಈ ಹಾನಿಯನ್ನು ಕುರಿತ ಮಾಹಿತಿಯನ್ನು ಸ್ಥಳೀಯ ಆಡಳಿತವು ಸಂಗ್ರಹ ಮಾಡುತ್ತಿದ್ದು, ಅಗತ್ಯ ಪರಿಹಾರವನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ತಹಶೀಲ್ದಾರ್ ಗಿರೀಶ್ ಇದ್ದರು.
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…