ಮೈಸೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರದಿಂದ ರಾಜ್ಯದ ನಾನಾ ಕಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಷ್ಟೇ ಅಲ್ಲ. ಈಶಾನ್ಯ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ ಅಕ್ಟೋಬರ್ನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದೆ.ಇದರಿಂದಾಗಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.
ಎರಡು ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಕಲಬುರಗಿ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರ್ನಾಟಕದ ಕೆಲವು ಭಾಗದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ. ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಕೆಎಸ್ಎನ್ಎಂಡಿಸಿ ಹೇಳಿದೆ.
ಕರ್ನಾಟಕದಲ್ಲಿ ಈ ಋತುವಿನಲ್ಲಿ ಶೇ.29ರಷ್ಟು ಅಧಿಕ ಮಳೆಯಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ ಸಾಮಾನ್ಯ 831.8 ಮಿ.ಮೀ ವಿರುದ್ಧವಾಗಿ 1,075.2 ಮಿಮೀ ಮಳೆಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವಾಡಿಕೆ ಮಳೆ 550 ಮಿ.ಮೀ ವಿರುದ್ಧವಾಗಿ 1,066 ಮಿ.ಮೀ ಮಳೆಯಾಗಿದೆ.
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…