ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.
ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು.
ಜಲಾವೃತ ಮನೆಗಳಿಂದ ವಯೋವೃದ್ದರನ್ನು ಸ್ಥಳಾಂತರ ಮಾಡಿಸಿದರು. ಸಂತ್ರಸ್ಥರನ್ನು ಭೇಟಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ಬಳಿಕ ಮಾತನಾಡಿ, 15 ವಾರ್ಡ್ ನ ಜೋಡಿರಸ್ತೆಗೆ ಹೊಂದಿಕೊಂಡಂತಿರುವ ರಾಜಕಾಲುವೆಗೆ ಅವೈಜ್ಞಾನಿಕ ಸೇತುವೆ ನಿರ್ಮಾಣ ಮಾಡಿರುವುದ್ದರಿಂದ ಜೋರುಮಳೆಯಾದರೆ ಪದೇಪದೇ ನಮ್ಮ ವಾರ್ಡ್ ನ ಕೆಲಭಾಗ ಜಲಾವೃತಗೊಂಡು ನಿವಾಸಿಗಳು ತುಂಬಾ ತೊಂದರೆಪಡುವಂತಾಗಿದೆ. ಈ.ಸಂಬಂಧ ಅನೇಕ ಬಾರಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಅವರು ವಾರ್ಡ್ ಗೆ ಭೇಟಿ ನೀಡಿ ಪರಿಶೀಲಿಸಿ ಹೋದರೇ ವಿನಾ ಯಾವುದೇ ಕ್ರಮಕೈಗೊಂಡಿಲ್ಲ. ವಾರ್ಡ್ ಅಭಿವೃದ್ದಿ ಹಾಗೂ ನಗರದ ಅಭಿವೃದ್ದಿಗಾಗಿ ಹೋರಾಟ ಮಾಡಿದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ರಾಜಕೀಯ ಮಾಡಿ ನನ್ನ ಮೇಲೆ ದೂರು ದಾಖಲು ಮಾಡಿದ್ದಾರೆ. ನಾವು ವಾರ್ಡ್ ಮತ್ತು ನಗರದ ಅಭಿವೃದ್ದಿಗಾಗಿ ಹೋರಾಟ ಮಾಡುವಂಗಿಲ್ಲವೇ ಎಂದು ಪ್ರಶ್ನಿಸಿದರು.
ಮಳೆನೀರಿನಿಂದ ಸುಮಾರು 100 ಕ್ಕೂ ಹೆಚ್ವು ಮನೆಗಳು ಜಲಾವೃತವಾಗಿದ್ದು, ತುಂಬಾ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಮಳೆಹಾನಿ ಸೂಕ್ತ ಪರಿಹಾರ ಕೊಡಬೇಕು. ಅಲ್ಲದೆ ಇದು ಕೊಳೆಚೆ ಪ್ರದೇಶವಾಗಿರುವುದ್ದರಿಂದ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು , ವಾರ್ಡನ ರಾಜಕಾಲುವೆಗೆ ಅವೈಜ್ಞಾನಿಕ ನಿರ್ಮಿಸಿರುವ ಸೇತುವೆಯನ್ನು ತೆರವುಗೊಳಿಸಬೇಕು ಆರ್.ಪಿ.ನಂಜುಂಡಸ್ವಾಮಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಾರ್ಡ ನಿವಾಸಿಗಳಾದ ಮನೋಜ್, ರವಿ, ಬಸವಣ್ಣ, ಗಣೇಶ ಇತರರು ಹಾಜರಿದ್ದರು.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…