ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದೆ.
ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿ ಸ್ಥಳೀಯ ತಹಶೀಲ್ದಾರ್ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ 10.ಸಾವಿರ ರೂಗಳ ಚೆಕ್ ಅನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ನಾಳೆ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ 95.000 ರೂ ಮೊತ್ತದ ಚೆಕ್ ನೀಡಲಾಗುವುದು ಎಂದು ಹೇಳಿದ್ದಾರೆ. ಕೂಡಲೇ ಅವರ ಸಮಸ್ಯೆಯನ್ನು ಬಗೆಹರಿಸಿ ಮನೆ ನುರ್ಮಾಣ ಮಾಡಿಕೊಡಬೇಕೆಂದು ಅಲ್ಲಿಯ ರೈತ ಮುಖಂಡ ವಿದ್ಯಾಸಾಗರ್ ಅವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.