ಜಿಲ್ಲೆಗಳು

ಮಳೆ ಹಾನಿ ಪರಿಹಾರಕ್ಕೆ ವಿಶೇಷ ಪ್ಯಾಕೇಜ್‌ ಕೇಳಿ ಗಮನ ಸೆಳೆದ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ  ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ  ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಪೇಸ್‌ ಬುಕ್‌ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ದರ್ಶನ್‌ ಪುಟ್ಟಣ್ಣಯ್ಯ ಅವರು ಮಂಡ್ಯ ಜಿಲ್ಲೆಯಾದ್ಯಂತ ಕಳೆದ 3 ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು ಸರಿಯಷ್ಟೇ .

264.54 ಹೆಕ್ಟೇರ್ ಕೃಷಿ ಬೆಳೆಹಾನಿ , 707.81 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಹಾನಿ, 259 ಶಾಲೆಗಳಿಗೆ ಹಾನಿ, 535 ಶಾಲಾ ಕೊಠಡಿ ಹಾನಿ, 51 ಸೇತುವೆಗಳು, 25 ಅಂಗನವಾಡಿ ಕೇಂದ್ರಗಳ ಹಾನಿ, 245.4 ಕಿ.ಮೀ. 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ . 1000 ಹೆಚ್ಚು ಮನೆಗಳು ಹಾನಿಯಾಗಿವೆ ಎಂದು ಅಂಕಿ ಅಂಶದ ಸಮೇತ ಅವರು ತಮ್ಮ ಮುಖಪುಟದಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಹಸಿಬರ ಘೋಷಣೆ ಮಾಡಿ ನೊಂದ ಜನರ ಕಣ್ಣೀರು ಒರೆಸುವ ಕೆಲಸ ಮಾಡಿ, ರೈತರ ನೋವಿಗೆ ಸ್ಪಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago