ಚಾಮರಾಜನಗರ: ಸಮೀಪದ ಸೋಮವಾರ ಪೇಟೆ ಬಡಾವಣೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಳಿ ರಸ್ತೆ ಹದಗೆಟ್ಟಿದ್ದು , ಸ್ಥಳಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಆಯುಕ್ತ ನಟರಾಜು ಭೇಟಿ ನೀಡಿ ಪರಿಶೀಲಿಸಿದರು.

ಮಳೆ ಬಂದಾಗ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿದರು. ತ್ವರಿತಗತಿಯಲ್ಲಿ ರಸ್ತೆ ದುರಸ್ತಿ ಮಾಡುವಂತೆ ಸೂಚನೆ ನೀಡಿದರು.





