ಮೈಸೂರು : ನಗರದಲ್ಲಿರುವ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವರನಟ ಡಾ. ರಾಜ್ ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಬಳಿಕ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಸಂಸದರಾದ ಪ್ರತಾಪ್ ಸಿಂಹ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಶ್ರೀನಿವಾಸ್ ಗೌಡ್ರು ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್ ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಅಶೋಕ ವಸ್ತು ಪ್ರದರ್ಶನ ಮಾಜಿ ಅಧ್ಯಕ್ಷರಾದ ಬಿಪಿ ಮಂಜುನಾಥ್ ಮೂಡ ಮಾಜಿ ಅಧ್ಯಕ್ಷರಾದ ರಾಜೀವ್ ಮುಂತಾದವು ಹಾಜರಿದ್ದರು.