Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಹನೂರು – ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಅನುದಾನ : ಸಚಿವ ಸುನೀಲ್ ಕುಮಾರ್

ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕ್ಕೆ ೨೦೨೨-೨೦೨೩ ನೇ ಸಾಲಿನಲ್ಲಿ ಹಂಚಿಕೆ ಆಗಿಲ್ಲ ಮುಂದಿನ ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯವ್ಯಯದಲ್ಲಿ ಸಾಕಷ್ಟು ಅನುದಾನ ಒದಗಿಸಿ ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯ ಗಡಿ ಭಾಗವಾಗಿದ್ದು ಗಡಿ ಅಭಿವೃದ್ದಿ ಪ್ರಾಧಿಕಾರದಿಂದ ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಸಾಲುಗಳಲ್ಲಿ ಕೊಳ್ಳೇಗಾಲ ತಾಲ್ಲೂಕಿನ (ಹನೂರು ತಾಲ್ಲೂಕು) ಸೇರಿದಂತೆ ಕನ್ನಡ ಶಾಲೆಗೆ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಕರ ವಸತಿಗೃಹ ನಿರ್ಮಾಣಕ್ಕೆ ಹಾಗೂ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿಅನುದಾನ ಬಿಡುಗಡೆ ಮಾಡಲಾಗಿದೆ.

ಶ್ರೀಮಲೆ ಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನ್ ಸೊಸೈಟಿ ರಿ ಸಂಚಾಲಿತ ಶ್ರೀ ಮಹದೇಶ್ವರ ಪ್ರೌಢಶಾಲೆ ಸೃಷ್ಟಿಸಿ ಶ್ರೀ ಸಾಲೂರು ಬೃಹನ್ಮಠದ ಶಾಲೆಗೆ ೨೦೨೦-೨೧ಸಾಲಿನಲ್ಲಿ ಶಾಲಾ ಆವರಣ ಗೋಡೆಗೆ ೧೦ಲಕ್ಷ ೨೦೨೧-೨೨ ನೇ ಸಾಲಿನಲ್ಲಿ ೧೧ ಲಕ್ಷ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!