ಜಿಲ್ಲೆಗಳು

ರಂಗಾಯಣದ ನಿರ್ದೇಶಕರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಟಿಪ್ಪು ನಿಜ ಕನಸುಗಳ ಎಂಬ ಕೃತಿಯಲ್ಲಿ ಹಲವಾರು ಸುಳ್ಳುಗಳನ್ನು ಪ್ರಸ್ತಾಪಿಸಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ಈ ಕೂಡಲೆ ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ದಸಂಸ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ರಂಗಾಯಣದ ನಿರ್ದೇಶಕ ಅಡ್ಡಂಡ ಕರ್ಯಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಟಿಪ್ಪು ಓರ್ವ ದೇಶಭಕ್ತ ಎಂಬುದರಲ್ಲಿ ಎರಡು ಮಾತಿಲ್ಲ. ಹಲವಾರು ಇತಿಹಾಸಕಾರರು ಇದನ್ನು ದಾಖಲಿಸಿದ್ದಾರೆ. ಆದರೂ ಕೂಡ ಬಿಜೆಪಿಯನ್ನು ಓಲೈಸಲು ಅಡ್ಡಂಡ ಕಾರ್ಯಪ್ಪ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ರಂಗಾಯಣ ಒಂದು ಸ್ವಾಯುತ್ತ ಸಂಸ್ಥೆ. ಅಲ್ಲಿ ಸಾಮಾಜಿಕ ಸಹಬಾಳ್ವೆ, ಸಾಮರಸ್ಯ, ಶಾಂತಿಯನ್ನು ಕಾಪಾಡುವ ಕೆಲಸವಾಗಬೇಕು. ಅದು ರಂಗಾಯಣದ ಜವಾಬ್ದಾರಿ ಕೂಡ. ತನ್ನ ಜವಾಬ್ದಾರಿಯನ್ನು ಮರೆತು ಕೋಮುವಾದಿಯಂತೆ ವರ್ತಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ದಸಂಸದ ಚೋರನಹಳ್ಳಿ ಶಿವಣ್ಣ, ಪ್ರೊ.ನಂಜರಾಜೇಅರಸ್, ಅಮ್ಜದ್‌ಖಾನ್, ರಫತ್ ಖಾನ್, ಶಿವರಾಜ್, ಶಿವಮೂರ್ತಿ, ಭಾಗ್ಯಮ್ಮ, ಪ್ರಭು ಮುಂತಾದವರು ಪ್ರತಿಭಟನೆ ವೇಳೆ ಹಾಜರಿದ್ದರು.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

6 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

6 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

6 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

10 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

11 hours ago