ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರಿಂದ ಪ್ರತಿಭಟನೆ
ಚಾಮರಾಜನಗರ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಚಾಚಾರ ಎಸಗಿದ ಶಿಕ್ಷಕ ಕಾಂತರಾಜು ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಪ್ರವರ್ಗ-೧ರ ಜಾತಿಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತ, ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ಬಾಗಳಿರೇವಣ್ಣ ಮಾತನಾಡಿ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ದಿವ್ಯಾ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು, ನೀರಿನ ಸಂಪ್‌ನಲ್ಲಿ ಬಿಸಾಕಿರುವ ಶಿಕ್ಷಕ ಕಾಂತರಾಜು ಅವರಿಗೆ ಮರಣ ದಂಡನೆ ವಿಧಿಸ ಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚುಂಗಡಿಪುರ ಮಹೇಶ್, ಕೋಟಂಬಳ್ಳಿ ಕುಮಾರ್, ಬೋರ್‌ವೆಲ್ ರಾಜುಗೌಡ, ಶಾಂತರಾಜು, ನಾಗರಾಜು, ಕೆ.ಕೆ.ಹುಂಡಿರಾಜು, ಕುದೇರು ಸುರೇಶ್, ಇರಸವಾಡಿ ಮಹದೇವಶೆಟ್ಟರು, ಬೂದಿತಿಟ್ಟು ಮಹದೇವು, ಸಿದ್ದಮುಳ್ಳೂರು, ವೆಂಕಟೇಶ್, ನಿರಂಜನ್, ಮಂಗಲಕುಮಾರ್, ಸಿದ್ದರಾಜು ಇತರರು ಪಾಲ್ಗೊಂಡಿದ್ದರು.
ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ…
ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ…
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…