ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಜಿಲ್ಲೆಯ ಮಳವಳ್ಳಿಯ ತಾಲ್ಲೂಕಿನ ಬಾಲಕಿಯ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದರು.