ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿವ್ಯಾಸಂಗ ಮಾಡುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣ ಎನ್ನಲಾದ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.
ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿದು ತಾಲ್ಲೂಕು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಶಿವಮ್ಮ ಇತರರು ಗ್ರಾಮಕ್ಕೆ ಧಾವಿಸಿ ಬಾಲಕಿಯನ್ನು ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆ ತಂದು ಪರೀಕ್ಷೆ ನಡೆಸಿ ಕುಟುಂಬದವರಿಂದ ಮಾಹಿತಿ ಪಡೆದರು.
ಬಾಲಕಿಯನ್ನು ಸದ್ಯ ಜಿಲ್ಲಾ ಮಕ್ಕಳ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಲವು ತಿಂಗಳ ಬಳಿಕ ಬಾಲಕಿ ಮನೆಯವರಿಗೆ ಗುರುವಾರ
ತಿಳಿಸಲಾಗಿ ವಿಷಯ ಗೊತ್ತಾಗಿದೆ.




