ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು.
ನಂತರ ಮಾತನಾಡಿದ ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅ. 11ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್ ಒಳಗೆ ಎಸೆಯಲಾಗಿದೆ. ಘಟನೆ ಸಂಬಂಧ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮ ಈಗ ಮಳವಳ್ಳಿಯ ಅಮಾಯಕ ಬಾಲಕಿ ಆತನಿಂದ ಬಲಿಯಾಗಿದ್ದಾಳೆ” ಎಂದು ದೂರಿದರು.
“ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ” ಎಂದು ಕುಶಲಸ್ವಾಮಿ ಹೇಳಿದರು.
“ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ” ಎಂದು ಕುಶಲಸ್ವಾಮಿ ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…