ಜಿಲ್ಲೆಗಳು

ಅತ್ಯಾಚಾರಕ್ಕೆ ತುತ್ತಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ನಿಖಿಲ್‌ ಕುಮಾರಸ್ವಾಮಿ ಸಾಂತ್ವನ

ಮಂಡ್ಯ : ಅತ್ಯಾಚಾರಕ್ಕೆ ತುತ್ತಾಗಿ ಬರ್ಬರವಾಗಿ ಕೊಲೆಯಾದ ಮಳವಳ್ಳಿಯ ಬಾಲಕಿ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಆ ತಂದೆ ತಾಯಿ ಗೋಳು ಯಾರಿಗೂ ಬಾರದಿರಲಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗಳನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಇಡೀ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಮುಂದುವರಿದು, ಪುಟ್ಟ ಕಂದಮ್ಮ ಅರಳುವ ಮುನ್ನವೇ ರಕ್ಕಸನ ಅಟ್ಟಹಾಸಕ್ಕೆ ಬಾಡಿಹೊದದ್ದು ದುರಂತ.
ಇದೊಂದು ಪೈಶಾಚಿಕ ಕೃತ್ಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಸರ್ಕಾರ ಹಾಗೂ ಪೋಲಿಸ್ ಇಲಾಖೆ ಎಚ್ಚರ ವಹಿಸಬೇಕು. ಈ ಹೋರಾಟದಲ್ಲಿ ನ್ಯಾಯ ಸಿಗುವವರೆಗೂ ಆ ಕುಟುಂಬದ ಪರವಾಗಿ ಇರುವೆ ಎಂದರು.
ಈ ಸಂದರ್ಭದಲ್ಲಿ ಮಳವಳ್ಳಿ ಶಾಸಕರಾದ ಅನ್ನದಾನಿ ಅವರು, ಮನ್ಮುಲ್ ಅಧ್ಯಕ್ಷರಾದ ಬಿ.ಆರ್.ರಾಮಚಂದ್ರ ಅವರು, ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಹಾಗೂ ಮನ್ಮುಲ್ ನಿರ್ದೇಶಕರಾದ ವಿ.ಎಂ. ವಿಶ್ವನಾಥ್ ಅವರು, ಮಂಡ್ಯ ಯುವ ಜನತಾದಳ ಅಧ್ಯಕ್ಷರಾದ ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

33 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

42 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago